Site icon Suddi Belthangady

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ, ಉಜಿರೆ ಯುವ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಅವನೀಶ್ ಅವರು ನಡೆಸಿಕೊಟ್ಟರು. ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಅದರ ಅಗತ್ಯ ಉಪಯೋಗ ಹಾಗೂ ಹೇಗೆ ಮಾಡಬೇಕು ಎಂಬಿತ್ಯಾದಿ ವಿಚಾರಗಳನ್ನು ಉದಾಹರಣೆ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಪರಿಮಳ ಎಂ.ಬಿ. ಅವರ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಅರ್ಘ್ಯ ಜೈನ್ ಸ್ವಾಗತಿಸಿದರು. ಆದ್ಯ ರೈ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಚಿಂತನ ಎಸ್. ಧನ್ಯವಾದವಿತ್ತರು.

Exit mobile version