ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಅವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಎಸ್. ಡಿ. ಎಂ. ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಜಿಪಿಟಿ ಶಿಕ್ಷಕ ಕಿರಣ್ ಎಸ್. ಪಿ. ಅವರು ಭಕ್ತ ಕನಕದಾಸರ ಗುಣಗಾನ ಮಾಡಿದರು. ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

