ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ: ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ

0

ಬೆಳ್ತಂಗಡಿ: ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲೆ ಘಟಕದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ನ. 9ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಜಿಲ್ಲಾ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನೆರವೇರಿತು.

ಸಭೆಯನ್ನು ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಜಿಲ್ಲಾ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯ ಆರಂಭದಲ್ಲಿ ಮುಂದಿನ ರಾಜ್ಯ ಅಧಿವೇಶನದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಿತು.

ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಅವರು ಕಾರ್ಯಕರ್ತರು ಸಂಘಟನೆಯ ಶಿಸ್ತು ಮತ್ತು ನಿಯಮಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿಹೇಳಿ, ಕಾರ್ಮಿಕ ಇಲಾಖೆಯೊಂದಿಗೆ ಉತ್ತಮ ಸಹಕಾರದ ವಾತಾವರಣವನ್ನು ನಿರ್ಮಿಸುವ ಮಹತ್ವವನ್ನು ವಿವರಿಸಿದರು.

ಬಿ.ಎಂ.ಎಸ್. ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು. ಅವರು ಡಿ.7ರಂದು ಮಂಡ್ಯದ ಶ್ರಿರಂಗಪಟ್ಟಣದಲ್ಲಿ ನಡೆಯಲಿರುವ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ರಾಜ್ಯ ಅಧಿವೇಶನ ಕುರಿತು ಪ್ರಮುಖ ಮಾರ್ಗಸೂಚಿಗಳನ್ನು ನೀಡಿದರು. ರಾಜ್ಯ ಅಧಿವೇಶನದಲ್ಲಿ ಪ್ರತಿ ತಾಲೂಕಿನಿಂದ ಆಯ್ದ ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸುವಂತೆ ಸೂಚಿಸಿ, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಉಜಿರೆ ಅವರು ಕಾರ್ಮಿಕರ ನೊಂದಣಿ ಪ್ರಕ್ರಿಯೆ ಮತ್ತು ಕಾರ್ಮಿಕ ಕಾರ್ಡ್ ಕುರಿತು ವಿವರವಾದ ಮಾಹಿತಿ ನೀಡಿದರು.
ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ ಅವರು ಸಂಘಟನೆಯ ವಾರ್ಷಿಕ ವರದಿ ವಾಚಿಸಿದರು.

ಸಭೆಯ ಅಂತ್ಯದಲ್ಲಿ ರಾಜ್ಯ ಅಧಿವೇಶನದ ಸಿದ್ಧತೆಯ ಪ್ರಮುಖ ಜವಾಬ್ದಾರಿಯನ್ನು ಕುಮಾರ್ ನಾಥ್ ಉಜಿರೆ ಅವರಿಗೆ ವಹಿಸಲಾಯಿತು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಿ, ರಾಜ್ಯಾಧಿವೇಶನವನ್ನು ಯಶಸ್ವಿಯಾಗಿ ನಡೆಸುವ ಬದ್ಧತೆಯನ್ನು ವ್ಯಕ್ತಪಡಿಸಿದರು. ಸಭೆಯು ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here