ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ ನ. 9ರಂದು ಪಾದಯಾತ್ರೆ ಸಮಿತಿಯ ಅಧ್ಯಕ್ಷ ಜಯಶಂಕರ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ವೇಣೂರು ವಲಯ ಕಚೇರಿಯಲ್ಲಿ ನಡೆಯಿತು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ ಶುಭ ಹಾರೈಸಿದರು. ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ.ಎಸ್., ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ, ಬಜಿರೆ ಗ್ರಾಮ ಸಮಿತಿಯ ಗೌರವಾಧ್ಯಕ್ಷ ಭರತ್ ರಾಜ್ ಜೈನ್, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಮೂಡುಕೋಡಿ , ಜನಜಾಗೃತಿ ವೇದಿಕೆಯ ವಲಯ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ, ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಜ್ಞಾನವಿಕಾಸದ ಸಂಯೋಜಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಶಾಲಿನಿ ಸ್ವಾಗತಿಸಿ, ಅಶೋಕ್ ಕಜಿಪಟ್ಟ ಧನ್ಯವಾದವಿತ್ತರು.
ವೇಣೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆ ಪೂರ್ವಭಾವಿ ಸಭೆ

