ಹೊಸಪಟ್ಣ: ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮಾದ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ನೂರಾರು ಸಾಮಾಜಿಕ ಸೇವೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯಾರೂ ಊಹಿಸದ ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸಿರುವುದು ಜಿಲ್ಲಾ ಪ್ರಶಸ್ತಿ ಬರಲು ಕಾರಣವಾಗಿದೆ. ಇದನ್ನು ಮನಗಂಡು ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ, ಹೊಸಪಟ್ಣ ಹಾಗೂ ಜಂಟಿ ಸಂಸ್ಥೆಗಳಾದ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ಸತ್ಯನಾರಾಯಣ ಭಜನಾ ಮಂಡಳಿ, ಹೊಸಪಟ್ಣ ಇದರ ಸರ್ವ ಸದಸ್ಯರು ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ ನ ಸಾಧನೆಯನ್ನು ಅಭಿನಂದಿಸಿ ನ. 9ರಂದು ಟ್ರಸ್ಟ್ ನ ಬೆನ್ನೆಲುಬಾದ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ಅವರಿಗೆ ಸನ್ಮಾನ ಮಾಡಲಾಯಿತು.
ವೇದಿಕೆಯಲ್ಲಿ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಿ ನಾರಾಯಣ ಹೆಗಡೆ, ಪುಷ್ಪಲತಾ ಮೋಹನ್ ಸಾಲಿಯನ್, ಲೀಲಾವತಿ ಶೆಟ್ಟಿ, ನಯನಾಡು ಶ್ರೀರಾಮ ಭಜನಾ ಮಂದಿರ ಗೌರವಾಧ್ಯಕ್ಷ ಜಾರಪ್ಪ ಪೂಜಾರಿ, ಶ್ರೀರಾಮ ಯುವಕ ಸಂಘದ ಗಣೇಶ್ ಹೆಗ್ಡೆ, ಗೆಳೆಯರ ಬಳಗ ಸಂಸ್ಥೆಯ ಸಂಚಾಲಕ ಎಲಿಯಸ್ ಕ್ರಾಸ್ತ, ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಜಾರಿಗೆದಡಿ, ಗೌರವಾಧ್ಯಕ್ಷ ಪದ್ಮನಾಭ ರೈ, ಬ್ರಾಣಿಗೇರಿ, ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ನಾಯರ್ಮೇರು ಮುಂತಾದವರು ಇದ್ದರು.
ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯ ಕಾರ್ಯದರ್ಶಿ ಭಾಸ್ಕರ್ ಪೂಜಾರಿ ನಾಯರ್ಮೇರು ಸಂಸ್ಥೆಯ ಹುಟ್ಟು-ಕಾರ್ಯವೈಖರಿಯ ಬಗ್ಗೆ ಪ್ರಾಸ್ತಾವಿಕಗೈದರು. ಸಮಿತಿಯ ಪ್ರಧಾನ ಸಂಚಾಲಕ ಗಣೇಶ ಪೂಜಾರಿ ಸನ್ಮಾನಪತ್ರ ವಾಚಿಸಿದರು. ಗೆಳೆಯರ ಬಳಗ ಸದಸ್ಯ ಪ್ರದೀಪ್ ಪಿಂಟೊ ಕಾರ್ಯ ನಿರ್ವಹಣೆ ಮಾಡಿದರು. ಗೆಳೆಯರ ಬಳಗದ ಅಧ್ಯಕ್ಷ ಡಾನ್ ಪ್ರವಿಣ್ ಕ್ರಾಸ್ತ ವಂದನಾರ್ಪನೆಗೈದರು.

