




ಬೆಳ್ತಂಗಡಿ: ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯು ದ.ಕ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಆಡಳಿತಾಧಿಕಾರಿಯವರಾದ ಜಯಲಕ್ಷ್ಮಿ ರಾಯಕೋಡರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನ.10ರಂದು ಜರುಗಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್, ಪಶು ಸಂಗೋಪನಾ ಇಲಾಖೆಯ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.









