


ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ವಿಜ್ಞಾನ ಸಂಘ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಇವುಗಳ ಸಹಭಾಗಿತ್ವದಲ್ಲಿ ಒಂದು ದಿನದ ಗಣಿತಶಾಸ್ತ್ರ ಕಾರ್ಯಗಾರ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ವಹಿಸಿದ್ದರು.



ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ, ಉಜಿರೆ SDM ಕಾಲೇಜಿನ ನಿವೃತ್ತ ಗಣಿತಶಾಸ್ತ್ರ ಪ್ರಾಧ್ಯಾಪಕ ಪ್ರೊಫೆಸರ್ ಪ್ರಕಾಶ್ ಪ್ರಭು ಆಗಮಿಸಿ ವಿದ್ಯಾರ್ಥಿಗಳಿಗೆ ಗಣಿತಶಾಸ್ತ್ರವನ್ನು ಹೇಗೆ ಅಧ್ಯಯನ ಮಾಡಬೇಕು, ಹೇಗೆ ಲೆಕ್ಕಗಳನ್ನು ಬಿಡಿಸಬೇಕು, ಕಠಿಣತೆಯಿಂದ ಸರಳತೆಗೆ ಗಣಿತವನ್ನು ತರುವ ಕೆಲವೊಂದು ತಂತ್ರಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು.
ವಿದ್ಯಾರ್ಥಿಗಳಿಂದ ರಚಿತವಾದ ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಸುಕೇಶ್ ಕುಮಾರ್, ಉಪ ಪ್ರಾಂಶುಪಾಲ ಬಿ.ಎ.ಶಮಿಉಲ್ಲಾ,
ಪದವಿ ವಿಭಾಗದ ಪ್ರಾಚಾರ್ಯ ಡಾ. ಸವಿತಾ ಉಪಸ್ಥಿತರಿದ್ದರು. ವಿಜ್ಞಾನ ಸಂಘದ ಸಂಯೋಜಕಿ ಮಾಯಾ ಭಟ್ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಕುಮಾರಿ ಭಾಗ್ಯಶ್ರೀ ಅತಿಥಿಗಳನ್ನು ಪರಿಚಯಿಸಿದರು. ಭೌತಶಾಸ್ತ್ರದ ಉಪನ್ಯಾಸಕಿ ಅನನ್ಯ ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಧನ್ಯವಾದಗೈದರು.









