Site icon Suddi Belthangady

ಬೆಳ್ತಂಗಡಿ: ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ. ಅಧಿಕಾರಿ ಸ್ವೀಕಾರ

ಬೆಳ್ತಂಗಡಿ: ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4ರಂದು ಸರಕಾರ ಆದೇಶ ಹೊರಡಿಸಿದ್ದು, ನ.10ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು. ಡಿವೈಎಸ್ಪಿ ರೋಹಿನಿ ಸಿ.ಕೆ. 2022 ರ ಬ್ಯಾಚ್‌ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ.

ಇವರು ಮೂಲತಃ ಬೆಂಗಳೂರಿನ ಮಲ್ಲೇಶ್ವರಂನವರು. ಬೆಳ್ತಂಗಡಿ, ಧರ್ಮಸ್ಥಳ, ವೇಣೂರು, ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಗಳು ಡಿವೈಎಸ್ಪಿ ಸಿ.ಕೆ.ರೋಹಿನಿ ಅವರನ್ನು ಸ್ವಾಗತಿಸಿಕೊಂಡರು.

Exit mobile version