Site icon Suddi Belthangady

ಬೆಳ್ತಂಗಡಿ: ಸುಬ್ರಮಣ್ಯ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಿಸಿದ ರೇಣುಕಾ ಪ್ರಸಾದ್ ಅವರನ್ನು ಗೌರವಿಸಿದ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಪದಾಧಿಕಾರಿಗಳು

ಬೆಳ್ತಂಗಡಿ: ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷೆ ರೇಣುಕಾ ಪ್ರಸಾದ್ ಕುರುಂಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ ಕಾರ್ಯಕ್ರಮದಲ್ಲಿ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡು ಅವರನ್ನು ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷವಾಗಿ ಗೌರವಿಸಿದರು.

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಹಾಗೂ ಧರ್ನಪ್ಪ ಗೌಡ ಬಾನಡ್ಕ, ಕೋಶಾಧಿಕಾರಿ ಯುವರಾಜ್ ಅನಾರು, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿಯ ಹಿರಿಯ ವಕೀಲ ಗೋಪಾಲಕೃಷ್ಣ ಗುಲ್ಲೋಡಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ ಸವನಾಲು, ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುನಿಲ್ ಅನಾವು, ಬಾರ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಪ್ರಸನ್ನ ಗೌಡ ತಾಲೂಕು ಸಂಘದ ನಿರ್ದೇಶಕರಾದ ಮಾಧವ ಗೌಡ ವಿ.ಜಿ., ವಸಂತಗೌಡ ನಡ ದಿನೇಶ್ ಗೌಡ ಕೊಯ್ಯೂರು, ಪುರಂದರ ಗೌಡ, ಯುವ ವೇದಿಕೆ ಕಾರ್ಯದರ್ಶಿ ಸುರೇಶ್ ಗೌಡ, ತೀಕ್ಷಿತ್ ಗೌಡ, ನಿತಿನ್ ಕಲ್ಮಂಜ, ರಂಜಿತ್ ಉಪಸ್ಥಿತರಿದ್ದರು.

Exit mobile version