ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭಜನಾ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ಭಜನಾ ಸೇವೆ ನ. 8ರಂದು ಭಕ್ತಿ ಭಾವಪೂರ್ಣವಾಗಿ ನೆರವೇರಿತು.
ಕಾರ್ತಿಕ ಮಾಸದ ಪ್ರಯುಕ್ತ ಆಯೋಜಿಸಲಾದ ಈ ಭಜನಾ ಸೇವೆಯಲ್ಲಿ ವಿದ್ಯಾರ್ಥಿಗಳು ನಾದ, ತಾಳ, ಭಕ್ತಿ ಸಂವೇದನೆಯಿಂದ ಕೂಡಿದ ವಿವಿಧ ಭಜನೆಗಳನ್ನು ಆಲಪಿಸಿ ಭಕ್ತರನ್ನು ಆನಂದಗೊಳಿಸಿದರು. ದೇವಿಯ ಸನ್ನಿಧಿಯಲ್ಲಿ ನಡೆದ ಈ ಭಜನಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
ಭಜನಾ ಮಂಡಳಿಯ ಅಧ್ಯಕ್ಷರು, ಗುರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರಸಾದ ವಿತರಣೆ ನಡೆಯಿತು.

