


ಬೆಳ್ತಂಗಡಿ: ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 8ರಂದು ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಹಲವು ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.


ಸೋನಿಯಾ ಬೆನ್ನಿಸ್ (9ನೇ) ಇಂಗ್ಲಿಷ್ ಭಾಷಣದಲ್ಲಿ ಪ್ರಥಮ ಸ್ಥಾನ, ವಿನಿಶಾ ಲಾಸ್ರಾದೋ (9ನೇ) ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಸುಧನ್ವ (10ನೇ) ಮತ್ತು ಅರ್ವಿನ್ ಬೆನ್ನಿಸ್ (9ನೇ) ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಮೃದುಲ ಕುಲಾಲ್ (8ನೇ) ಪ್ರಬಂಧ ಬರಹದಲ್ಲಿ ದ್ವಿತೀಯ ಸ್ಥಾನ, ಸ್ಕೃತಿ (8ನೇ) ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಖುಷಿ (10ನೇ) ರಂಗೋಲಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಹಾಗೂ ರೀಶೆಲ್ ಡಿ ಸೋಜಾ (9ನೇ) ಹಿಂದಿ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಗುರು ವೋಲ್ಟರ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಗುರು ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.









