ಬೆಳಾಲು: ಶ್ರೀ ಸರಸ್ವತಿ ಅಂಗನವಾಡಿ ಕೇಂದ್ರದಲ್ಲಿ ಕಳೆದ 35 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಜೆಸ್ಸಿ ಡಿಸೋಜರಿಗೆ ನ. 15ರಂದು ಬೆಳಾಲು ಮೈತ್ರಿ ಯುವಕ ಮಂಡಲದ ಆವರಣದಲ್ಲಿ ಗೌರವಾರ್ಪಣಾ ಸಮಿತಿ, ಬೆಳಾಲು ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಬೆಳಾಲು ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಹಾಗೂ ಊರವರ ಸಹಕಾರದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಗೌರವಾರ್ಪಣೆ ಸಮಿತಿಯ ಅಧ್ಯಕ್ಷೆ ಲತಾ ಕೇಶವ ಗೌಡ ವಹಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಅಭಿನಂದನಾ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜತ್ತಣ್ಣ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಉಜಿರೆ ಶ್ರೀ ಧ. ಮಂ. ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ರಜತ್ ಹೆಚ್. ಪಿ., ಬೆಳ್ತಂಗಡಿ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಬೆಳಾಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ, ಅಂಗನವಾಡಿ ಮೇಲ್ವಿಚಾರಕಿ ಕುಮಾರಿ ಲಲಿತಾ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ವಿಮಲಾ ಭಾಗವಹಿಸಲಿದ್ದಾರೆ.
ನಿವೃತ್ತರಾದ ಕೊಲ್ಪಾಡಿ ಅಂಗನವಾಡಿ ಕಾರ್ಯಕರ್ತೆ ಲೀಲಾ ಎಸ್. ಬೆಳಾಲು ಅಂಗನವಾಡಿ ಸಹಾಯಕಿ ವನಜಾಕ್ಷಿ ಅವರಿಗೂ ಸನ್ಮಾನ ನಡೆಯಲಿದೆ.

