ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ 2k25 ಫೆಸ್ಟ್

0

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಾಣಿಜ್ಯ ಕ್ಲಬ್ ನ ವತಿಯಿಂದ ಕಾಲೇಜಿನಲ್ಲಿ ವಾಣಿಜ್ಯ 2ಕೆ25 ಫೆಸ್ಟ್ ನ್ನು ವಾಣಿಜ್ಯಶಾಸ್ತ್ರದ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಸವಿತಾ ಉದ್ಘಾಟಿಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳನ್ನ ತಿಳಿಹೇಳಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಸುಖೇಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮಿವುಲ್ಲಾ ವಾಣಿಜ್ಯ 2K25 ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳೊಂದಿಗೆ ವಿವರಿಸಿ ಶುಭ ಹಾರೈಸಿದರು. ವಾಣಿಜ್ಯ ಸಂಘದ ಸಂಯೋಜಕಿ ಸುಷ್ಮಾ ಸ್ವಾಗತಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖುಷಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಪಡೆದ ತಂಡಗಳಿಗೆ ಪ್ರಶಸ್ತಿ ಹಾಗೂ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಮತ್ತೋರ್ವ ಸಂಯೋಜಕಿ ನಂದಿನಿ ಶರ್ಮ ಧನ್ಯವಾದಗೈದರು.

LEAVE A REPLY

Please enter your comment!
Please enter your name here