


ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು 4 ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಅಲ್ ಸ್ಟನ್ ಡಿಸಿಲ್ವ (10ನೇ) 200ಮೀ. ಮತ್ತು 800ಮೀ. ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ, ಪ್ರಣವ್ (8ನೇ) ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ತ್ರಿಶಾ ಗೋವಿಯಸ್ (7ನೇ) ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಗುರು ವೋಲ್ಟರ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಗುರು ಕ್ಲಿಫರ್ಡ್ ಪಿಂಟೋ ಅವರು ಅಭಿನಂದಿಸಿದರು. ದೈಹಿಕ ಶಿಕ್ಷಕ ಸಂದೀಪ್ ಕುಮಾರ್ ಅವರು ಈ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿರುತ್ತಾರೆ.









