



ವೇಣೂರು: ಕರ್ನಾಟಕ ಸರ್ಕಾರ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಉಪನಿರ್ದೇಶರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಇದರ ಸಹಯೋಗದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಾದ ಧನುಶ್ರೀ ಎಸ್. ಕುಲಾಲ್ ಪ್ರಥಮ ಸ್ಥಾನವನ್ನು ಭಾಷಣದಲ್ಲಿ, ಪ್ರಬಂಧದಲ್ಲಿ ಅನ್ವಿತ ದ್ವಿತೀಯ ಸ್ಥಾನ, ಚಿತ್ರಕಲೆಯಲ್ಲಿ ಶರತ್ ತೃತೀಯ ಸ್ಥಾನವನ್ನು ಪಡೆದು ಮೂರು ವಿಭಾಗಗಳಲ್ಲೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಜಿಲ್ಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಉಪಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ, SDMC ಕಾರ್ಯಧ್ಯಕ್ಷರು ಹಾಗೂ ಸದಸ್ಯರು ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.









