Site icon Suddi Belthangady

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ- ಬೆಳ್ತಂಗಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ-ಗೆಜ್ಜೆಗಿರಿ ಕ್ಷೇತ್ರದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷರಿಗೆ ಗೌರವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂಪಾಯಿ 7 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಯತ್ರಿ ನಿವಾಸ ನ. 23ರಂದು ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬೆಳ್ತಂಗಡಿಯಲ್ಲಿ ಬಿಡುಗಡೆ ಮತ್ತು ವಿತರಣೆ ನ.10ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ನಿವೃತ್ತ ಎಸ್. ಪಿ. ಪೀತಾಂಬರ ಹೇರಾಜೆ ಮಾತನಾಡಿ 2013ರಲ್ಲಿ ಬೆಳ್ತಂಗಡಿಯ ಬಿಲ್ಲವ ಸಮಾಜ ಬಾಂಧವರು ಅಲ್ಲಿಗೆ ಭೇಟಿ ಕೊಟ್ಟ ನಂತರ ಕ್ಷೇತ್ರದ ಅಭಿವೃದ್ಧಿಯಾಗಿ ಅನೇಕ ಭಕ್ತರು ಆಗಮಿಸುತ್ತಿದ್ದು ಅವರಿಗಾಗಿ ಯಾತ್ರಿ ನಿವಾಸ, ನಾರಾಯಣ ಗುರು ಪೀಠ ನಿರ್ಮಾಣ ಆಗಲಿದೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್‌ ಗೌರವಾಧ್ಯಕ್ಷ ಡಾ.ರಾಜಶೇಖ‌ರ್ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಜೊತೆ ಕಾರ್ಯದರ್ಶಿ ಡಾ.ಸಂತೋಷ್ ಕೋಟ್ಯಾನ್, ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕ ಪ್ರಮಲ್ ಕುಮಾರ್ ಕಾರ್ಕಳ, ಗೆಜ್ಜೆಗಿರಿ ಕ್ಷೇತ್ರಾ ದಲಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ., ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ. ಬಂಗೇರ, ಶ್ರೀ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ಕೃಷ್ಣಪ್ಪ ಪೂಜಾರಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಕೋಟ್ಯಾನ್ ಎಚ್., ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್‌, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಜಯಂತ ನಡುಬೈಲು, ಜತೆ ಕಾರ್ಯದರ್ಶಿ ಡಾ. ಸಂತೋಷ ಕೋಟ್ಯಾನ್, ಮೂಡಬಿದ್ರೆಯ ಕುಮಾರ್ ಇರುವೈಲು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಹಾಲಿ ನಿರ್ದೇಶಕರು, ಗ್ರಾಮ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಗೆಜ್ಜೆಗಿರಿ ಕ್ಷೇತ್ರದಿಂದ ಗೌರವಿಸಿದರು. ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಅಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಕೆ.ವಿ. ಪ್ರಸ್ತಾಪಿಸಿದರು. ಬೆಳ್ತಂಗಡಿ ತಾಲೂಕು ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರಾಡಳಿತ ಸಮಿತಿ ಕಾರ್ಯದರ್ಶಿ ಡಾ. ರಾಜಾರಾಮ್ ಕೆ. ಬಿ. ವಂದಿಸಿದರು.

Exit mobile version