ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ದತ್ತಿ ನಿಧಿ ಸ್ಥಾಪನೆ

0

ಬೆಳ್ತಂಗಡಿ: ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಹಮಿಲನ – 2025 ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ಜರಗಿತು.

ಸಂಸ್ಥೆಯ ಮಹಾಪೋಷಕ ಆನೆಗುಂದಿ ಶ್ರೀ ಸರಸ್ವತಿ ಪೀಠದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರಿಗೆ ರೂಪಾಯಿ ರೂ 1,50,000 ದತ್ತಿನಿಧಿಯನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ ಹಸ್ತಾಂತರಿಸಿದರು. ಇದರ ವಾರ್ಷಿಕ ಬಡ್ಡಿಯಿಂದ ಪ್ರತಿ ವರ್ಷವೂ 8, 9 ಮತ್ತು 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಮಾತಾ ಪಿತರಾದ ವಾರಿಜ ಆಚಾರ್ ಮತ್ತು ಕೆ. ಮೋನಪ್ಪ ಆಚಾರ್ಯ ಗೇರುಕಟ್ಟೆ ಬೆಳ್ತಂಗಡಿ ಅವರ ಸ್ಮರಣೆಯಲ್ಲಿ ಸಂಸ್ಥೆಗೆ ಪ್ರಥಮವಾಗಿ ದತ್ತಿನಿಧಿಯನ್ನು ನೀಡಿದ ದಿವಾಕರ ಆಚಾರ್ಯ ಮತ್ತು ಭಾರತಿ ಎಮ್. ಎಲ್ ದಂಪತಿಯನ್ನು ಸ್ವಾಮಿಗಳು ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು.

ಆಸೆಟ್ ಅಧ್ಯಕ್ಷ ಬಿ.ಸೂರ್ಯಕುಮಾರ ಹಳೆಯಂಗಡಿ, ಕಾರ್ಯದರ್ಶಿ ಗುರುರಾಜ್ ಕೆ. ಮಂಗಳೂರು, ವಿದ್ಯಾ ಭಾರತಿಯ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಮಹೇಶ ಹೈಕಾಡಿ, ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠ ಕುತ್ಯಾರಿನ ಪ್ರಧಾನ ಕಾರ್ಯದರ್ಶಿ ಎಂ.ಬಿ. ಲೋಕೇಶ್ ಆಚಾರ್ಯ, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅನಿತಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here