ಪಡಂಗಡಿ: ನಿವೃತ್ತಿ ಹೊಂದಿದ ಶಾರದಾ ಎನ್.ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ

0

ಪಡಂಗಡಿ: ಧಾರವಾಡದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ 2009 ರಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಬಡ್ತಿ ಹೊಂದಿ, 24 ವರ್ಷ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ 2015ರಲ್ಲಿ ಪಡಂಗಡಿ ಪ್ರೌಢಶಾಲೆಗೆ ವರ್ಗಾವಣೆಗೊಂಡು ಇತ್ತೀಚೆಗೆ ನಿವೃತ್ತಿ ಹೊಂದಿದ ಶಾರದಾ ಎನ್.ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶಾಲೆಯಲ್ಲಿ ಜರಗಿತು.

ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಡಂಗಡಿ ಪ್ಯಾಕ್ಸ್ ಸಿಇಒ ಸುಕೇಶಿನಿ ಕಾರ್ಯಕ್ರಮ ಉದ್ಘಾಟಿಸಿದರು. ಬಿಇಒ ತಾರಾಕೇಸರಿ, ಗ್ರಾ.ಪಂ. ಉಪಾಧ್ಯಕ್ಷೆ ವಸಂತಿ ಪಿ.ಎನ್., ಸದಸ್ಯ ಸಂತೋಷ್ ಕುಮಾರ್ ಜೈನ್, ತಾಲೂಕು ಸಮನ್ವಯಾಧಿಕಾರಿ ಬಸವಲಿಂಗಪ್ಪ, ಶಿಕ್ಷಣ ಸಂಯೋಜಕ ಸಿದ್ದಲಿಂಗ ಸ್ವಾಮಿ, ಸಮೂಹ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ವಲಯ ಸಂಪನ್ಮೂಲ ವ್ಯಕ್ತಿ ಆರತಿ ಜೈನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಪೀಟರ್ ಮೋನಿಸ್, ಪ್ಯಾಕ್ಸಾ ಉಪಾಧ್ಯಕ್ಷ ನರೇಂದ್ರ ಕುಮಾರ್ ಜೈನ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಮ್ಯಾಕ್ಸಿಮ್ ಸಿಕ್ವೇರಾ, ಕುಂಭಶ್ರೀ ವಿದ್ಯಾಸಂಸ್ಥೆಯ ಸಂಚಾಲಕ ಗಿರೀಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಮ್ಮದ್ ರಿಯಾಝ್, ತಾಲೂಕು ಅಧ್ಯಕ್ಷ ರಾಧಾಕೃಷ್ಣ,
ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ತುಳುಪುಳೆ, ಪಡಂಗಡಿ ಸ.ಉ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಮೊಹಮ್ಮದ್ ಫಾರೂಕ್ ಉಪಸ್ಥಿತರಿದ್ದರು.

ಶಿಕ್ಷಕರಾದ ಶ್ರೀಶ ಭಟ್, ಫ್ಲೋರಿನ್ ಲವೀನಾ ಫೆರ್ನಾಂಡಿಸ್, ಶಶಿಕಲಾ, ಕಾಂತಿಮಣಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾರಾಯಣ, ಉಮೇಶ, ಅರುಣ್ ಕುಮಾರ್, ವಿಜಯ, ಲೋಲಾಕ್ಷಿ, ರೇಖಾ, ಗೀತಾ, ರುಕಿಯಾ ಬಾನು, ಲಿಪಿಕ ಸಂಘದ ಅಧ್ಯಕ್ಷ ಶಿವಶಂಕರ್ ಸಹಕರಿಸಿದರು. ಶಿಕ್ಷಕಿ ಅನ್ನಮ್ಮ ಸ್ವಾಗತಿಸಿದರು. ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು. ಚೈತ್ರಾ ವಂದಿಸಿದರು.

LEAVE A REPLY

Please enter your comment!
Please enter your name here