Site icon Suddi Belthangady

ಬುರುಡೆ ಪ್ರಕರಣ-ಎಸ್.ಐ.ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್-ಮತ್ತೆ ಚುರುಕು ಪಡೆಯಲಿರುವ ತನಿಖೆ

ಬೆಂಗಳೂರು: ಧರ್ಮಸ್ಥಳದ ಪೊಲೀಸ್ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ತೆರವುಗೊಳಿಸಿ, ಮತ್ತೆ ಎಸ್. ಐ. ಟಿ ತನಿಖೆಗೆ ಅನುಮತಿ ನೀಡಿದೆ. ಎಫ್‌.ಐ.ಆರ್ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ , ವಿಠಲ್ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್,
ಆರೋಪಿಗಳಿಗೆ ಕಿರುಕುಳ ನೀಡದಂತೆ ಇರುವ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ. ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ಹೊರಡಿಸಲಾಗಿದೆ.

Exit mobile version