ಹೊಸಂಗಡಿ: ಗ್ರಾಮ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ರೋಟರಿ ಕ್ಲಬ್ ಸಿದ್ಧಕಟ್ಟೆ ಪಲ್ಗುಣಿ, ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತ್ ನಲ್ಲಿ ನ. 11ರಂದು ನಡೆದ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಿತು. ಉದ್ಘಾಟನಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ನ ಸದಸ್ಯರು, ರೋಟರಿ ಕ್ಲಬ್ ಸಿದ್ಧಕಟ್ಟೆ ಪಲ್ಗುಣಿ ಇದರ ಅಧ್ಯಕ್ಷ, ಆರಂಬೋಡಿ ಗ್ರಾಮ ಪಂಚಾಯತ್ ಪಂ. ಅಭಿವೃದ್ದಿ ಅಧಿಕಾರಿ ಗಣೇಶ್ ಶೆಟ್ಟಿ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎನ್. ಆರ್. ಎಲ್. ಎಂ. ನ ಪಶುಸಖಿ, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ 268 ಸಾಕು ನಾಯಿಗಳಿಗೆ ಲಸಿಕೆಯನ್ನು ನೀಡಲಾಯಿತು.

