Site icon Suddi Belthangady

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ನಾರವರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್‌ ಕಾಶಿಪಟ್ನಾ ಅವರನ್ನು ಆಯ್ಕೆ ಮಾಡಿದೆ.

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ನಾ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ. ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Exit mobile version