ಬೆಳ್ತಂಗಡಿ: ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಶ್ರಾವ್ಯ ಉದ್ದ ಜಿಗಿತದಲ್ಲಿ ಹಾಗೂ ತ್ರಿಪಲ್ ಜಂಪ್ ನಲ್ಲಿ ಪ್ರಥಮ ಸ್ಥಾನ, ಹ್ಯಾಮರ್ ಎಸೆತದಲ್ಲಿ ಅನುಷಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ 3000ಮೀ ಓಟದಲ್ಲಿ ಪ್ರತೀಕ್ಷಾ, ಚಕ್ರ ಎಸೆತದಲ್ಲಿ– ಮನೀಶ್ ತೃತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಪ್ರಾಥಮಿಕ ವಿಭಾಗದ ಬಾಲಕಿಯರು ಅಪೇಕ್ಷಾ, ಸಾನ್ವಿ, ವೈಷ್ಣವಿ, ಲೆನ್ವಿಟಾ ರಿಲೇ ಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

