



ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ CA ಸುದೇಶ್ ಕುಮಾರ್ ರೈ ಅವರ ಕಛೇರಿಯಲ್ಲಿ ತೆಂಕು ಹಾಗೂ ಬಡಗು ತಿಟ್ಟಿನ ಕಲಾವಿದರುಗಳಿಗೆ ಪಟ್ಲ ಯಕ್ಷಾಶ್ರಯ ಗೃಹ ನಿರ್ಮಾಣದ ಚೆಕ್ ಹಾಗೂ ಸಹಾಯಧನ ವಿತರಿಸಲಾಯಿತು.


ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, CA ಸುದೇಶ್ ರೈ, ಪ್ರದೀಪ್ ಆಳ್ವ ಕದ್ರಿ, ಡಾ. ಪ್ರಖ್ಯಾತ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪಟ್ಲ ಫೌಂಡೇಶನ್ ನ ಕೊಡುಗೈ ದಾನಿಗಳನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಅರ್ಪಿಸಲಾಯಿತು.









