


ಶಿರ್ಲಾಲು: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಯುವಬಿಲ್ಲವ ವೇದಿಕೆ ಇದರ ಸಹಕಾರದೊಂದಿಗೆ ಡಿ. 7ರಂದು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾಕೂಟ 2025 ಇದರ ಆಮಂತ್ರಣ ಪತ್ರಿಕೆಯನ್ನು ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮ ಯಶಸ್ವಿಯಾಗುವಂತೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಯುವ ಸಮುದಾಯದ ಸಬಲೀಕರಣಕ್ಕಾಗಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನಗೊಳ್ಳಲು ಎಲ್ಲರ ಸಹಕಾರವನ್ನು ಕೋರಿದರು.



ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಶಿರ್ಲಾಲು ಸಹಕಾರ ಸಂಘದ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಕೋಶಾಧಿಕಾರಿ ಚಿದಾನಂದ ಇಂಚರ, ಸದಸ್ಯರಾದ ಯಶೋಧರ ಸುವರ್ಣ ರಮೇಶ್ ಪೂಜಾರಿ ಚಂದ್ರಶೇಖರ ಸೂರ್ಲೋಡಿ, ರಮೇಶ್ C A ಬ್ಯಾಂಕ್, ಪ್ರಶಾಂತ್ ಇಂದ್ರಪ್ರಸ್ಥ, ನಂದ ಕುಮಾರ್, ರಮೇಶ್ ಆಚಾರಿಬೆಟ್ಟು, ದಿವಾಕರ ಜಾರಿಗೆದಡಿ, ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಊರ ಯುವಬಿಲ್ಲವ ವೇದಿಕೆ ಅಧ್ಯಕ್ಷ ಜ್ಞಾನೇಶ್ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ಶೋಭ ಗೋಣಗುರಿ, ಯುವವಾಹಿನಿ ಸಂಚಾಲನ ಸಮಿತಿ ಅಧ್ಯಕ್ಷ ಯತೀಶ್ ಕರಂಬಾರು, ಬ್ರಹ್ಮ ಬೈದರ್ಕಳ ಗರಡಿ ಜಾತ್ರಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸುದಲಾಯಿ ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ, ಗೆಜ್ಜೆಗಿರಿ ಗ್ರಾಮ ಸಮಿತಿಯ ಅಧ್ಯಕ್ಷ ಉಮೇಶ್ ಸುವರ್ಣ, ಕಾರ್ಯದರ್ಶಿ ಅಶೋಕ ಮಡೆಮಾರು, ಶಿವಾನಂದ ಮಜಲಪಲ್ಕೆ, ಹರೀಶ್ ನೇತ್ರಬೈಲು, ಆನಂದ ಪೂಜಾರಿ ಕರಂಬಾರು, ಹರೀಶ್ H S ಆಟೋ, ಗಿರೀಶ್ ನಿಸರ್ಗ, ಗಣೇಶ್ ಪೊಸಲಾಯಿ ಹಾಗೂ ಊರವರು ಉಪಸ್ಥಿತರಿದ್ದರು.
ಬೆಳ್ತಂಗಡಿ ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಮ್.ಕೆ. ಪ್ರಸಾದ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.









