ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ಅವರು ಕನಕದಾಸರ ಜೀವನ ಶೈಲಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ನಂತರ ಮಾತನಾಡಿದ ಶಾಲಾ ಶಿಕ್ಷಕ ಪವನ್ ಕುಮಾರ್ ಅವರು ಕನಕದಾಸರು ನಡೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳಿಂದ ಕನಕದಾಸರ ಕೀರ್ತನೆಗಳನ್ನು ಹಾಡಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಶೀಲಾ ಎನ್. ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ಪುಷ್ಪಲತಾ ಅವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಹಕರಿಸಿದರು.

