Site icon Suddi Belthangady

ಉಜಿರೆ: ಎಸ್‌.ಡಿ.ಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ತಂಡ- ಟೇಬಲ್ ಟೆನ್ನಿಸ್ ಚಾಂಪಿಯನ್

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಜೆ.ಜೆ. ಮೆಡಿಕಲ್ ಕಾಲೇಜ್, ದಾವಣಗೆರೆ ಇವರ ಆಶ್ರಯದಲ್ಲಿ ನಡೆದ ಅಂತರ್ ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ.

ಸೆಮಿಫೈನಲ್ ಪಂದ್ಯದಲ್ಲಿ ಉಜಿರೆಯ ತಂಡವು ಸಪ್ತಗಿರಿ ಮೆಡಿಕಲ್ ಕಾಲೇಜ್, ಬೆಂಗಳೂರಿನ ತಂಡವನ್ನು 3–0 ಅಂತರದಲ್ಲಿ ಮಣಿಸಿ ಫೈನಲ್‌ಗೆ ಪ್ರವೇಶಿಸಿತು. ನಂತರ ನಡೆದ ಅಂತಿಮ ಘಟ್ಟದಲ್ಲಿ ಆರ್.ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜ್, ಕಲ್ಬುರ್ಗಿ ತಂಡವನ್ನು 3–1 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಸ್ಪರ್ಧೆಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಉಜಿರೆ ಕಾಲೇಜಿನ ಎರಡು ವಿದ್ಯಾರ್ಥಿನಿಯರು ದಕ್ಷಿಣ ಭಾರತ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ, ಎಂಬುದು ಕಾಲೇಜು ವಲಯದಲ್ಲಿ ಹರ್ಷವನ್ನುಂಟುಮಾಡಿದೆ.

ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ.

Exit mobile version