ಬೆಳ್ತಂಗಡಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114)ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ನ. 14ರಂದು ವಿಧಿವಶರಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದೆ.
ನ. 15ರಂದು ಅಂತ್ಯಕ್ರಿಯೆಯನ್ನು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೊಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಗೌರವಾರ್ಥವಾಗಿ ನ. 15ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ, ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

