ಪುಂಜಾಲಕಟ್ಟೆ: ಕೆ.ಪಿ.ಎಸ್. ಪದವಿ ಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ ನ. 14ರಂದು ಜರಗಿತು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ, ಮಕ್ಕಳ ದಿನಾಚರಣೆಯ ಶುಭಾಶಯ ಕೋರುತ್ತಾ ಮಕ್ಕಳ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತ ತಂದೆ ತಾಯಿ ಮತ್ತು ಸಮಾಜದ ಕೊಡುಗೆಯನ್ನು ಸದಾ ಸ್ಮರಿಸುವುದು ಮಕ್ಕಳ ಜವಾಬ್ದಾರಿ ಎಂದು ನೆನಪಿಸಿದರು.
ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಕೆ., ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯರಾಮ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಉಪಸ್ಥಿತರಿದ್ದರು. ದತ್ತಿ ಬಹುಮಾನ, ಆಟೋಟ ಸ್ಪರ್ಧೆ, ಕಲಿಕಾ, ಮತ್ತು ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು. ಪೋಷಕ ರಕ್ಷಕ ಸಭೆ ನಡೆಸಲಾಯಿತು. ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಹೈಸ್ಕೂಲ್ ಪ್ರಭಾರ ಉಪಾಪ್ರಾಂಶುಪಾಲ ನಿರಂಜನ್ ಜೈನ್ ಮತ್ತು ಶಾಲಾಭಿವೃದ್ಧಿ ಸದಸ್ಯ ದಿವಾಕರ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

