ಬೆಳಾಲು: ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಹಾಗೂ ಪೋಷಕರ ಮಹಾಸಭೆಯನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ.ಸಿ. ಯ ಅಧ್ಯಕ್ಷ ಶಶಿಧರ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಾಲಾ ಸಂಸತ್ತಿನ ನಾಯಕ ಶ್ರವಣ್ ಉದ್ಘಾಟಿಸಿದರು. ಮಕ್ಕಳ ದಿನಾಚರಣೆಯ ನಿಮಿತ್ತ ವಿದ್ಯಾರ್ಥಿಗಳಿಗೆ ವಿವಿಧ ಆಟೋ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು. ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಗೆ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ, ಪ್ರೇಮಾ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಗಂಗಾಧರ ಸಾಲಿಯಾನ್, ಉಪಾಧ್ಯಕ್ಷೆ ಶಶಿಕಲಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಪಿಲತ್ತಡಿ , ಮಾಯ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಗೌಡ ಉಪಸ್ಥಿತರಿದ್ದರು.
ಅತಿಥಿ ಶಿಕ್ಷಕಿ ಪ್ರಜ್ಞಾ ಹಾಗೂ ಗೌರವ ಶಿಕ್ಷಕಿ ಕಾವ್ಯ ಆಟೋಟ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಹಾಗೂ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಧರ ಶಿಲ್ಪಿ ಅವರಿಗೆ ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಮಾಯಾ ಫ್ರೆಂಡ್ಸ್ ವತಿಯಿಂದ ಅಭಿನಂದಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ವಿಠಲ ಎಂ. ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಜಿಪಿಟಿ ಶಿಕ್ಷಕ ಯೋಗೇಶ್ ಹೆಚ್. ಆರ್.ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕಿ ಜಾನ್ಸಿ ಕಲಿಕೆಯ ಕುರಿತು ಪೋಷಕರೊಂದಿಗೆ ಸಂವಾದಿಸಿ ವಂದಿಸಿದರು.

