ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವು ನ.15 ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವೈದ್ಯ ಡಾ. ರಾಹುಲ್ ದೇವರಾಜ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಉಪಾಧ್ಯಕ್ಷ ಧರ್ಣಪ್ಪ ಗೌಡ, ಪ್ರಮುಖರಾದ ನಾರಾಯಣ ಗೌಡ ಹಾಗೂ ಶ್ರೀನಾಥ್, ಕೋಶಾಧಿಕಾರಿ ಯುವರಾಜ್ ಅನಾರು, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀ ನಾರಾಯಣ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜನಾರ್ದನ ಗೌಡ ಬಂದಾರು ಉಪಸ್ಥಿತರಿದ್ದರು. ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಮೀನಾಕ್ಷಿ ವಾರ್ಷಿಕ ವರದಿ ಮಂಡಿಸಿದರು.

