ಕಾಯರ್ತಡ್ಕ: ನ. 14ರಂದು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಪುಟಾಣಿ ಚಿನ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಪುಟಾಣಿಗಳಾದ ಧನ್ವಿತ್, ಹರುಶ್ ಕೋಟ್ಯಾನ್ ನೆರವೇರಿಸಿದರು. ಕಳೆಂಜದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆ ಗೊಂಡಿರುವ ಪ್ರಶಾಂತ ಪೂಜಾರಿ, ಕಾಯರ್ತಡ್ಕ ಅಂಗನವಾಡಿ ಕೇಂದ್ರದಲ್ಲಿ 10ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಲಿಯಮ್ಮ, ಲಕ್ಷ್ಮಣ ಗೌಡ, ಕಳೆಂಜ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಜೆ ಅವರನ್ನು ಸನ್ಮಾನಿಸಲಾಯಿತು.
ಅಂಗನವಾಡಿ ಕೇಂದ್ರದ ಮಕ್ಕಳಿಗೆ, ಸ್ತ್ರಿ ಶಕ್ತಿ, ಮಕ್ಕಳ ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅರಣ್ಯಾ ಧಿಕಾರಿ ಪ್ರಶಾಂತ್ ಪೂಜಾರಿಯವರು ಮಕ್ಕಳಿಗೆ ಸಿಹಿತಿಂಡಿ ಹಾಗೂ ಉಡುಗೊರೆ ನೀಡಿ ಪ್ರೋತ್ಸಾಹಿಸಿದರು. ಹಾಗೆಯೇ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಅಂಗನವಾಡಿ ಶಿಕ್ಷಕಿ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಪ್ರೇಮ ಸ್ತ್ರಿ ಶಕ್ತಿ ಕೇಂದ್ರದ ಅಧ್ಯಕ್ಷೆ ಉಷಾ ಧನ್ಯವಾದವಿತ್ತರು.

