




ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನೆರವೇರಿತು. ಶಾಲಾ ಸಂಚಾಲಕ ಗುರು ಎಲಿಯಸ್ ಡಿಸೋಜಾ ರವರು ಮಕ್ಕಳ ದಿನಾಚರಣೆ ಉದ್ದೇಶವನ್ನು ವಿದ್ಯಾರ್ಥಿಗಳಿಗೆ ತಿಳಿಸಿ 2024- 25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ ಹಾಗೂ ಶಿಕ್ಷಕರು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಸಹ ಶಿಕ್ಷಕಿ ಸಿ. ಅನ್ನಪೂರ್ಣ ಸ್ವಾಗತಿಸಿ, ಪ್ರೇಮ ನಿರೂಪಿಸಿದರು. ಸುಜಾತ ವಂದಿಸಿದರು.









