Site icon Suddi Belthangady

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನೆರವೇರಿತು. ಶಾಲಾ ಸಂಚಾಲಕ ಗುರು ಎಲಿಯಸ್ ಡಿಸೋಜಾ ರವರು ಮಕ್ಕಳ ದಿನಾಚರಣೆ ಉದ್ದೇಶವನ್ನು ವಿದ್ಯಾರ್ಥಿಗಳಿಗೆ ತಿಳಿಸಿ 2024- 25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ ಹಾಗೂ ಶಿಕ್ಷಕರು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಸಹ ಶಿಕ್ಷಕಿ ಸಿ. ಅನ್ನಪೂರ್ಣ ಸ್ವಾಗತಿಸಿ, ಪ್ರೇಮ ನಿರೂಪಿಸಿದರು. ಸುಜಾತ ವಂದಿಸಿದರು.

Exit mobile version