


ಬೆಳಾಲು: ಶ್ರೀ ಧ. ಮಂ. ಅ. ಪ್ರೌಢ ಶಾಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು. ಮಕ್ಕಳ ದಿನಾಚರಣೆಯ ವಿಶೇಷತೆ ಬಗ್ಗೆ 8ನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಮಾತನಾಡಿದರು. ಬಿ.ಎಡ್ ಪ್ರಶಿಕ್ಷಣಾರ್ಥಿ ಮಕ್ಕಳ ದಿನಾಚರಣೆಯ ಕುರಿತು ಹಾಡನ್ನು ಹಾಡಿದರು.
ವೇದಿಕೆಯಲ್ಲಿ ಶಿಕ್ಷಕವೃಂದವರು, ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ದಿ ಹಿಂದೂ ಪತ್ರಿಕೆಯ ನೆಹರೂ ಕುರಿತ ವಿಶೇಷ ಆಂಗ್ಲ ಅವತರಣಿಕೆಯನ್ನು ಎಲ್ಲಾ ಮಕ್ಕಳಿಗೆ ಉಚಿತವಾಗಿ ಹಂಚಲಾಯಿತು. 10ನೇ ತರಗತಿಯ ತ್ರಿಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.









