ಬೆಳಾಲು: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಜೆಸ್ಸಿ ಡಿಸೋಜರಿಗೆ ಗೌರವಾರ್ಪಣೆ

0

ಬೆಳಾಲು: ಶ್ರೀ ಸರಸ್ವತಿ ಅಂಗನವಾಡಿ ಕೇಂದ್ರದಲ್ಲಿ ಕಳೆದ 35 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಜೆಸ್ಸಿ ಡಿಸೋಜರಿಗೆ ನ. 15ರಂದು ಬೆಳಾಲು ಮೈತ್ರಿ ಯುವಕ ಮಂಡಲದ ಆವರಣದಲ್ಲಿ ಸರಸ್ವತಿ ಗೌರವಾರ್ಪಣಾ ಸಮಿತಿ, ಬೆಳಾಲು ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಬೆಳಾಲು ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಹಾಗೂ ಊರವರ ಸಹಕಾರದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಗೌರವಾರ್ಪಣೆ ಸಮಿತಿಯ ಅಧ್ಯಕ್ಷೆ ಲತಾ ಕೇಶವ ಗೌಡ ವಹಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಅಭಿನಂದನಾ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಎನ್. ಜತ್ತಣ್ಣ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ, ಅಂಗನವಾಡಿ ಮೇಲ್ವಿಚಾರಕಿ ಲಲಿತಾ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ವಿಮಲಾ ಭಾಗವಹಿದ್ದರು.

ನಿವೃತ್ತರಾದ ಕೊಲ್ಪಾಡಿ ಅಂಗನವಾಡಿ ಕಾರ್ಯಕರ್ತೆ ಲೀಲಾ ಎಸ್. ಬೆಳಾಲು ಅಂಗನವಾಡಿ ಸಹಾಯಕಿ ವನಜಾಕ್ಷಿ ಇವರನ್ನು ಸನ್ಮಾನಿಸಲಾಯಿತು. ಗೌರವಾರ್ಪಣೆ ಸಮಿತಿಯ ಕಾರ್ಯದರ್ಶಿ ಮಹಮ್ಮದ್
ಶರೀಶ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಪ್ರೇಮಾ, ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು, ಗೌರವಾರ್ಪಣೆ ಸಮಿತಿಯ ಕೋಶಾಧಿಕಾರಿ ಶಿವಕುಮಾರ್ ಬಾರಿತ್ತಾಯ, ಉಪಾಧ್ಯಕ್ಷರಾದ ಆಶಾ ಪರಂಗಾಜೆ, ಮಹಮ್ಮದ್, ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಸಹಾಯಕಿ ಜಯಶ್ರೀ, ಇತರ ಸದಸ್ಯರು, ಬಾಲಾವಿಕಾಸ ಸಮಿತಿ, ಹಳೆ ವಿದ್ಯಾರ್ಥಿಗಳು, ಪೋಷಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಊರವರು ಉಪಸ್ಥಿತರಿದ್ದು ಸಹಕರಿಸಿದರು.

ಸಮಿತಿಯ ಜತೆಕಾರ್ಯದರ್ಶಿ ಶಾಲಿನಿ ಶಶಿಧರ್ ಪ್ರಾರ್ಥಿಸಿ, ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕ ಮಹೇಶ್ ಪುಳಿತ್ತಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಮೊದಲು ಅಂಗನವಾಡಿ ಕೇಂದ್ರದ ನಾಮ ಪಲಕವನ್ನು ಅನಾವರಣಗೊಳಿಸಿ ಅತಿಥಿಗಳನ್ನು ಮೆರವಣಿಗೆ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಯಿತು.

LEAVE A REPLY

Please enter your comment!
Please enter your name here