


ಕುತ್ಲೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 14ರಂದು ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ ಶಿಕ್ಷಕ ಮಹಾಸಭೆ ನಡೆಯಿತು. ಎಸ್. ಡಿ. ಎಂ. ಸಿ ಅಧ್ಯಕ್ಷ ಕನಕವರ್ಮ ಜೈನ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಬಿ.ಕೆ.ಬೇಬಿ ಶೆಟ್ಟಿ ಕರ್ನಾಟಕ ರಾಜ್ಯ ಸರ್ಕಾರದ ರೇಷ್ಮೆ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಉಪಸ್ಥಿತರಿದ್ದು ಮಕ್ಕಳು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು.


ಮುಖ್ಯ ಶಿಕ್ಷಕಿ ಫ್ಲೇವಿಯ ಡಿಸೋಜ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಶಿಕ್ಷಕಿಯರಾದ ರೂಪಾ ಕುಮಾರಿ ಹಾಗೂ ಜ್ಯೋತಿ ಎ. ಎನ್. ರವರು ಪೋಷಕರೊಂದಿಗೆ ಸಮಾಲೋಚನೆ ನಡೆಸಿದರು. ನಾರಾವಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಮರ್ದೊಟ್ಟು ಹಾಗೂ ಆಶಾಲತ,
ಎಸ್. ಡಿ. ಎಮ್. ಸಿ ಉಪಾಧ್ಯಕ್ಷೆ ಶ್ವೇತಾ ಜಗದೀಶ್, ವಿದ್ಯಾರ್ಥಿ ನಾಯಕಿ ಅದ್ವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೋಷಕರು ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಭಾಗಿಗಳಾಗಿದ್ದರು. ಜ್ಞಾನದೀಪ ಶಿಕ್ಷಕಿ ಆಶಾರವಿ ದೇವಾಡಿಗ ಸ್ವಾಗತಿಸಿದರು. ಗೌರವ ಶಿಕ್ಷಕಿ ಕಿರಣ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಶಿಕ್ಷಕಿ ರಮ್ಯ ಧನ್ಯವಾದ ಸಮರ್ಪಿಸಿದರು.









