ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಶೋಧನೆ ಪ್ರವೃತ್ತಿ ಪ್ರವರ್ಧನೆಗೆ ತರಲು ಸ್ಥಾಪಿಸಿದ ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯವನ್ನು ನ.14ರಂದು ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ದ. ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಮಡಂತ್ಯಾರು ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದ, ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

