


ಧರ್ಮಸ್ಥಳ: ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳ ಅಭಿವೃದ್ಧಿಯ ಬಲವರ್ಧನೆ ಎಂಬ ತತ್ವದೊಂದಿಗೆ ಧರ್ಮಸ್ಥಳ ಸಹಕಾರ ಸಂಘದ ನೇತೃತ್ವದಲ್ಲಿ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಎಲ್ಲಾ ಬೂತ್ ಮಟ್ಟದಲ್ಲಿ ಸ್ವಚ್ಛತಾ ಆಂದೋಲನ ಸಹಕಾರಿಗಳ ಸಹಕಾರದೊಂದಿಗೆ ನ. 15ರಂದು ನಡೆಯಿತು.




ಶಾಸಕ ಹರೀಶ್ ಪೂಂಜಾ ಉದ್ಘಾಟನೆ ನೆರವೇರಿಸಿದರು. ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ.
ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಪೂರ್ಣೇಶ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಧರ್ಮಸ್ಥಳ ಸಹಕಾರ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ನಿರ್ದೇಶಕರು, ಸಿಬ್ಬಂದಿಗಳು, ಹಲವಾರು ಸಹಕಾರಿ ಬಂಧುಗಳು, ಧರ್ಮಸ್ಥಳ ಮತ್ತು ಪುದುವೆಟ್ಟು ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಛತೆಯಲ್ಲಿ ಪಾಲ್ಗೊಂಡರು.
ಇದರ ಜೊತೆಗೆ ಧರ್ಮಸ್ಥಳ ಹಾಗೂ ಪುದುವೆಟ್ಟಿನ ಹಲವು ರಸ್ತೆ ಬದಿಯ ಹುಲ್ಲು ತೆಗೆಯುವ ಕೆಲಸಕ್ಕೆ ಚಾಲನೆ ನೀಡಲಾಯಿತು.









