ನಡ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಮಗು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಹೊಕ್ಕಿಲ ನರ್ಜೆ ಕ್ರಾಸ್ ಬಳಿ ನ. 16 ರಂದು ರಾತ್ರಿ ನಡೆದಿದೆ.
ನಾವೂರು ಕಡೆಯಿಂದ ಶಶಿ ಎಂಬವರ ಆಟೋದಲ್ಲಿ ಮಕ್ಕಳನ್ನು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಗು ಸೇರಿದಂತೆ ಆಟೋದಲ್ಲಿ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಅವರನ್ನು ತಕ್ಷಣ ಸ್ಥಳೀಯ ನಿವಾಸಿಗಳು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಇನ್ನುಳಿದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

