Site icon Suddi Belthangady

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ ನ.15ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಪ್ರಾಂಶುಪಾಲ ಸುರೇಶ್ ಮಹಲಿಂಗಾಪುರ್ ಹಾಗೂ ಮಂಗಳೂರಿನ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ವಹಿಸಿ, ಸ್ವಾಗತಿಸಿದರು. ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Exit mobile version