ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸೌಮ್ಯ ಲಾಯಿಲ ಅವರು ಸರಕಾರದ ಗ್ಯಾರಂಟಿ ಸಮಿತಿಯ ಸದಸ್ಯೆಯಾಗಿದ್ದಾರೆ. ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದು ಪಕ್ಷದ ಸರಕಾರವಿದ್ದರೂ ಇಲ್ಲದಿದ್ದರೂ ಪಕ್ಷಕ್ಕಾಗಿ ಸದಾ ದುಡಿದವರು. ಅವರ ಸೇವೆಯನ್ನು ಗುರುತಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪಕ್ಷದ ಗ್ರಾಮೀಣ ಘಟಕಕ್ಕೆ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ನೀಡಿದೆ.
ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಗ್ರಾಮೀಣ ಘಟಕಕ್ಕೆ ಕಾರ್ಯದರ್ಶಿಯಾಗಿ ಸೌಮ್ಯ ಲಾಯಿಲ ನೇಮಕ

