




ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ 2025- 26ರ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆಯು ನ. 15ರಂದು ನಡೆಯಿತು. ಶಾಲಾ ಸಂಚಾಲಕ ಗುರು ಎಲಿಯಸ್ ಡಿಸೋಜಾ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದು, ಕ್ರೀಡಾ ಜ್ಯೋತಿಯನ್ನು ಬೆಳಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ, ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ಲಿಯೋ ಪಿರೇರಾ ಉಪಸ್ಥಿತರಿದ್ದರು. ಈ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು. ಸಹ ಶಿಕ್ಷಕಿ ನಂದಿನಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ಮಲ ನಿರೂಪಿಸಿದರು. ಪ್ರತಿಭಾ ಅವರು ವಂದಿಸಿದರು.









