ಬೆಳ್ತಂಗಡಿ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಪ್ರಾಯೋಜಕತ್ವದಲ್ಲಿ ನ. 15ರಂದು ಗುಲ್ಬರ್ಗ ಜಿಲ್ಲೆಯ ಬಂದೇನವಾಝ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಬೆಳ್ತಂಗಡಿ ತಾಲೂಕಿನ ಪ್ರತಿಷ್ಠೆಯು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕಾವಳಕಟ್ಟೆ ಅಲ್ ಖಾದಿಸದಲ್ಲಿ ಹಿಫ್ಲ್, ಓದುತ್ತಿರುವ ಸೈಯ್ಯದ್ ಮಹಮ್ಮದ್ ಉವೈಸ್ ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ. ಈ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸೈಯ್ಯದ್ ಅಯ್ಯುಬ್ ಹಾಗೂ ನೂರುಶಬ ಅವರ ಪುತ್ರರಾಗಿದ್ದಾರೆ.
ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಲಾಯಿಲ ಘಟಕದ ವಿದ್ಯಾರ್ಥಿಯಾಗಿದ್ದು, ಬೆಳ್ತಂಗಡಿ ಸೆಕ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ, ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ ಮೂರನೇ ಬಾರಿ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಉರ್ದು ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ ಜಮ್ಮು ಕಾಶ್ಮೀರ ಮುಂತಾದ ರಾಜ್ಯದ ವಿದ್ಯಾರ್ಥಿಗಳ ಪ್ರಬಲ ಪೈಪೋಟಿಯ ನಡುವೆಯೂ ತನ್ನ ಮಾತಿನ ವಿಶೇಷ ಕೌಶಲ್ಯದಿಂದ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರು, ಶಿಕ್ಷಕರು ತಾಲೂಕು ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.. ಉವೈಸ್ ಅವರಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

