



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ.
ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್ (ECE) ವಿಭಾಗದ ಸಹ ಪ್ರಾಧ್ಯಾಪಕಿ ಅರ್ಪಿತಾ ಅವರು, ಡಾ. A. L. ಚೂಡರತ್ನಾಕರ ರವರ ಮಾರ್ಗದರ್ಶನದಲ್ಲಿ ‘Landslide Susceptibility Mapping for Kodagu Region Using Machine Learning Techniques ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ರವರು, ಡಾ. ಯರ್ರಿಸ್ವಾಮಿ ಟಿ. ರವರ ಮಾರ್ಗದರ್ಶನದಲ್ಲಿ ‘Impact of Antenna Array Geometries on Direction of Arrival Estimation’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.
ಗಣಿತ ವಿಭಾಗದ ಸಹ ಪ್ರಾಧ್ಯಾಪಕ ನಂದೀಶ್ ಅವರು, ಡಾ. ಉಶಾ ಪಿ. ರವರ ಮಾರ್ಗದರ್ಶನದಲ್ಲಿ ‘Results on Labelling and Spectra of Graphs’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.









