




ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಮುಂಬರುವ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಸಂಚಾಲಕ ಸುಬ್ರಮಣ್ಯ ಪ್ರಸಾದ್ ಅವರ ಮಾರ್ಗದರ್ಶನದಂತೆ ಕುಣಿತ ಭಜನಾ ಗುರು ನಾಗೇಶ್ ಬಿ. ನೆರಿಯ ಅವರ ಮುಂದಾಳತ್ವದಲ್ಲಿ ನ.16 ಸಂಕ್ರಾಂತಿಯ ದಿನದಂದು ನಾರ್ಯ ಪೊದುಂಬಿಲ ಶ್ರೀ ಷಣ್ಮುಖ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆಯ ನಂತರ ಹೆಗ್ಗಡೆ ಅವರಿಗೆ ಸುಖ, ಶಾಂತಿ, ನೆಮ್ಮದಿ, ಆರೋಗ್ಯ, ಆಯಸ್ಸು ಹಾಗೂ ಇನ್ನಷ್ಟು ಜನ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಶಕ್ತಿಯನ್ನು ನೀಡುವಂತೆ ಷಣ್ಮುಖ ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಈ ರೀತಿಯ ಪ್ರಾರ್ಥನೆಯು ನಡೆಯುತ್ತಿದೆ.









