



ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ 2025ರ ಸೆ. 18ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ನ.17ರಂದು ರದ್ದುಪಡಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ 15 ದಿನಗಳಲ್ಲಿ ಹೊಸ ಆದೇಶ ಹೊರಡಿಸುವಂತೆ ಪುತ್ತೂರು ಉಪವಿಭಾಗಾಧಿಕಾರಿಗೆ ಪೀಠ ಆದೇಶಿಸಿದೆ.
ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿಯನ್ನು ಗಡೀಪಾರು ಮಾಡಿ ಸೆ.18ರಂದು ಆದೇಶ ಹೊರಡಿಸಿದ್ದರು. ಇದರ ವಿರುದ್ಧ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು.









