ವೇಣೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ವೇಣೂರು ಘಟಕದ ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ. 16ರಂದು ಕೊಕ್ರಾಡಿಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು
ಸಮಾರಂಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಆಶೀರ್ವಚನ ನೀಡಿ, ಸತ್ಕಾರ್ಯಗಳಿಂದ ಎಲ್ಲರ ಮನಸ್ಸು ಗೆಲ್ಲಲು ಸಾಧ್ಯ. ಸತ್ಕಾರ್ಯಗಳಿಂದ ಸಮಾಜ ದಲ್ಲಿ ಉನ್ನತಿ ಕಾಣಲಿದ್ದೇವೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ ನಾರಾಯಣ ಗುರುಗಳ ವಿಚಾರಧಾರೆ ಇಂದಿಗೂ ಜೀವಂತ ವಾಗಿದೆ ಶಕ್ತಿಯುತವಾಗಿದೆ ಮತ್ತು ಮಾನವ ಕುಲಕ್ಕೆ ದಾರಿದೀಪ ವಾಗಿದೆ. ಅವರ ಸಂದೇಶಗಳು ಕೇವಲ ಮಾತು ಗಳಲ್ಲ ಆವು ಜೀವನವನ್ನು ರೂಪಿಸುವ ಸಮಾಜವನ್ನು ಪರಿವರ್ತಿಸುವ ಪ್ರಬಲ ಶಕ್ತಿ. ಗುರುಗಳ ಸಂದೇಶವು ಕೇವಲ ಒಂದು ಜಾತಿ, ಪ್ರದೇಶಕ್ಕೆ ಸೀಮಿತವಲ್ಲ ಅದು ಮಾನವ ಕೋಟಿಗೆ ಕೊಟ್ಟ ಅಮೃತ ಮಾತು ಇದನ್ನು ಅನುಷ್ಠಾನ ಗೊಳಿಸುವ ಯುವವಾಹಿನಿ ಸಂಸ್ಥೆ ಸಮಾಜಕ್ಕೆ ಶಕ್ತಿ ತುಂಬಿದೆ ಎಂದರು.
ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಮರೋಡಿ ದೇವಸ್ಥಾನದ ಪ್ರ. ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಪೆರಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸತೀಶ್ ಕೆ., ಕಂಬಳ ಕೋಣಗಳ ಯಜಮಾನ ಗಣೇಶ್ ನಾರಾಯಣ ಪಂಡಿತ್ ಮೂಡುಕೋಡಿ, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ನಿತೀನ್ ಮುಂಡೇವು, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಪಿಡಿಒ ರಾಘವೇಂದ್ರ ಪಾಟೀಲ್, ಕುಕ್ಕೇಡಿ ಪಿಡಿಒ ಸುಧಾಕರ್ ಡಿ., ಅಶೋಕ್ ಕುಮಾರ್ ಪಡ್ಡು, ಗುರುನಾರಾಯಣ ಸ್ವಾಮಿ ವೇಣೂರು ವಲಯ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ಕೊಕ್ರಾಡಿ ಅಧ್ಯಕ್ಷ ಮಂಜಪ್ಪ ಪೂಜಾರಿ ಕೊಕ್ರಾಡಿ, ಯುವವಾಹಿನಿ ವೇಣೂರು ಘಟಕದ ನಿಯೋಜಿತ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ, ನಿಯೋಜಿತ ಪ್ರ. ಕಾರ್ಯದರ್ಶಿ ದಕ್ಷಾ ಅಂಬಲ ಅಂಡಿಂಜೆ ಸೇರಿದಂತೆ ಹಲವು ಅತಿಥಿ ಗಣ್ಯರು ಭಾಗವಹಿಸಿದರು.
ವೇಣೂರು ಯುವವಾಹಿನಿ ಸ್ಥಾಪಕ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಅರುಣ್ ಕೋಟ್ಯಾನ್ ನಿರೂಪಿಸಿದರು.

