ಬೆಳ್ತಂಗಡಿ: ರಾಜ್ಯಸಭಾ ಸಂಸದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ.2.00ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಸಂತೆಕಟ್ಟೆ ಅಯ್ಯಪ್ಪ ಮಂದಿರದಿಂದ ಕೆಇಬಿ ರಸ್ತೆ- ರೆಂಕೆದ ಗುತ್ತು- ಮಲ್ಲೊಟ್ಟು ಸಂಪರ್ಕ ರಸ್ತೆಯ ಅಗಲೀಕರಣ- ಡಾಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ನ. 17 ರಂದು ನೆರವೇರಿತು. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜಾ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.
ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ಆವರಣಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ವಿಶೇಷ ಆಹ್ವಾನಿರಾದ ಖ್ಯಾತ ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡಾ, ಸಂಧ್ಯಾ ಟ್ರೇಡರ್ಸ್ ಉಜಿರೆ ಹಾಗೂ ಸಿರಿ ಸಂಸ್ಥೆ ನಿರ್ದೇಶಕ ರಾಜೇಶ್ ಪೈ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯನಂದ ಗೌಡ, ಎಸ್.ಕೆ.ಡಿ.ಆರ್.ಡಿ. ಪಿ ಯ ಸಿ ಒ ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿವರ್ಗ ದವರು ಭಾಗಿಯಾಗಿದ್ದರು.
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಹಾಗೂ ಸಿರಿ ಸಂಸ್ಥೆಯ ಎಂ.ಡಿ. ಕೆ. ಎನ್. ಜನಾರ್ಧನ್ ರವರು ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

