



ಕಲ್ಲೇರಿ: ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಹಾಗೂ ಉಪ್ಪಿನಂಗಡಿ ಶಾಖೆ ಬ್ಯಾಂಕ್ ಒಫ್ ಬರೋಡ ನೇತೃತ್ವದಲ್ಲಿ, 3 ದಿನಗಳ ಉಚಿತ ಸೀರೆ ಗೊಂಡೆ ಹಾಕುವ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರುಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಕರೆ ನೀಡಿದರು.

ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಸೀರೆ ಗೊಂಡೆ ಹಾಕಿ ಸ್ವ ಉದ್ಯೋಗ ಮಾಡಲು ಇರುವ ಅವಕಾಶ ಗಳ ಬಗ್ಗೆ ತಿಳಿಸಿ ತರಬೇತಿ ನಂತರ ಎಲ್ಲಾ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿ, ಬ್ಯಾಂಕ್ ನಲ್ಲಿ ಸ್ವ ಉದ್ಯೋಗಕ್ಕೆ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಮಂಗಳೂರು ಬ್ಯಾಂಕ್ ಬರೋಡ ಝೋನಲ್ ಆಫೀಸ್ ನ ಹಿಂದಿ ರಾಜ್ಯ ಭಾಷಾ ವಿಭಾಗದ ಮುಖ್ಯ ವ್ಯವಸ್ತಾಪಕ ಡಾ. ಬಾಲ ಮುರುಗನ್ ತರಬೇತಿ ಪಡೆದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಕೇದಾರ್ನಾಥ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಿಳೆಯರಿಗೆ ಸಿಗುವ ಕೃಷಿ ಆಧಾರಿತ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಸತೀಶ್ ನಾಯಕ್, ವರಲಕ್ಷ್ಮಿ ಪೂಜಾ ಸಂಘದ ಅಧ್ಯಕ್ಷೆ ಪ್ರಮೀಳಾ, ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು. 3 ತಿಂಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸೌಜನ್ಯ ಸ್ವಾಗತಿಸಿ, ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿ, ರತ್ನವತಿ ಧನ್ಯವಾದಗೈದರು.








