




ವೇಣೂರು: ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆದ ತಾಲೂಕು ಮಟ್ಟದ ಜ್ಞಾನ ಹಾಗೂ ಮೌಲ್ಯಾಧಾರಿತ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದ 10ನೇ ತರಗತಿಯ ಅನ್ವಿತಾ ಹಾಗೂ ಸಮೃದ್ಧಿ ಜೈನ್ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ SDMC ಕಾರ್ಯಾಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಣ ಸಂಸ್ಥೆ ಅವರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದರು.









